ಹೊಸನಗರ: ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಬಜರಂಗದಳದ ಸದಸ್ಯರು ಪ್ರತಿಭಟನೆ ನಡೆಸಿದರು.
ಹೊಸನಗರ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಸಭೆ ಸೇರಿದ ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ತಾಲ್ಲೂಕು ಕಚೇರಿವರಿಗೆ ಮೆರವಣಿಗೆ ಮೂಲಕ ತೆರಳಿ ಅಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ, ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಎಂ.ಎನ್. ಸುಧಾಕರ್, ಮುಖಂಡರಾದ ಉಮೇಶ್ ಕಂಚುಗಾರ್, ಸುರೇಶ್ ಸ್ವಾಮಿರಾವ್, ವೀರೇಶ್ ಅಲವಳ್ಳಿ, ಕೆ.ವಿ. ಕೃಷ್ಣಮೂರ್ತಿ, ಗಣಪತಿ ಬೆಳಗೋಡು, ನಗರ ನಿತಿನ್, ರಮೇಶ್, ಸತೀಶ್ ಸೊನಲೆ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.