ADVERTISEMENT

ಶಿಕಾರಿಪುರದಲ್ಲಿ ಹಿಂಸೆಗೆ ತಿರುಗಿದ ಲಂಬಾಣಿ ಸಮುದಾಯದ ಪ್ರತಿಭಟನೆ: ಲಾಠಿ ಚಾರ್ಜ್

ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸು ನಿರ್ಧಾರಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 8:28 IST
Last Updated 27 ಮಾರ್ಚ್ 2023, 8:28 IST
   

ಶಿಕಾರಿಪುರ: ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವ ಸರ್ಕಾರದ ನಿರ್ಧಾರ ವಿರೋಧಿಸಿ ಪಟ್ಟಣದಲ್ಲಿ ಸೋಮವಾರ ಬಂಜಾರ ಸಮಾಜದವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಭಾವಚಿತ್ರದ ಪ್ಲೆಕ್ಸ್ ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಯಡಿಯೂರಪ್ಪ ಅವರ ಮನೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯತ್ತ ಕಲ್ಲು ತೂರಾಟ ನಡೆಸಿದ್ದಾರೆ.

ADVERTISEMENT

ಬ್ಯಾರಿಕೇಡ್ ಗಳನ್ನು ದಾಟಿ ಯಡಿಯೂರಪ್ಪ ಮನೆಗೆ ಪ್ರತಿಭಟನಾಕಾರರು ನುಗ್ಗುವುದನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈಗ ಪಟ್ಟಣದ ತಾಲ್ಲೂಕು ಪಂಚಾಯ್ತಿ ಮುಂಭಾಗಕ್ಜೆ ಪ್ರತಿಭಟನೆ ಸ್ಥಳಾಂತರಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.