ADVERTISEMENT

ಪೌರತ್ವ ಕಾಯ್ದೆ ಬೆಂಬಲಿಸಿ ನಾಳೆ ಸಾರ್ವಜನಿಕ ಸಭೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 13:52 IST
Last Updated 23 ಜನವರಿ 2020, 13:52 IST

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬಿಜೆಪಿ ಜಿಲ್ಲಾ ಘಟಕ ಜ.25ರಂದು ಸಾಗರ ಮತ್ತು ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆ ಆಯೋಜಿಸಿದೆ ಎಂದು ಬಿಜೆಪಿ ಮುಖಂಡ ಎಸ್‌.ಎನ್‌.ಚನ್ನಬಸಪ್ಪ ಹೇಳಿದರು.

ಕೆಲವು ಪಕ್ಷ, ಸಂಘಟನೆಗಳು ವಿನಾಕಾರಣ ಹಬ್ಬುತ್ತಿರುವ ಸುಳ್ಳು ಸುದ್ದಿ ತಡೆಯಲು ಸಭೆ ಆಯೋಜಿಸಲಾಗುತ್ತಿದೆ. ಕಾಯ್ದೆಯನ್ನುಸುಪ್ರೀಂಕೋರ್ಟ್ಒಪ್ಪಿದೆ. ಆದರೂ, ಕಾಂಗ್ರೆಸ್ ಸೇರಿದಂತೆ ಕೆಲವರು ವಿರೋಧಿಸುತ್ತಿದ್ದಾರೆ. ಕಾಯ್ದೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

25ರಂದು ಸಾಗರದ ಗಾಂಧಿ ಮೈದಾನದಲ್ಲಿ ಸಾರ್ವಜನಿಕ ಸಭೆಆಯೋಜಿಸಲಾಗಿದೆ.ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಭಾಗವಹಿಸುತ್ತಾರೆ. ಅಂದು ಸಂಜೆ ಶಿವಮೊಗ್ಗದ ಎನ್.ಡಿ.ವಿ. ಹಾಸ್ಟೆಲ್ ಆವರಣದಲ್ಲಿ ಸಭೆ ಆಯೋಜಿಸಲಾಗಿದೆ. ಎರಡೂ ಕಡೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವರುಎಂದು ವಿವರ ನೀಡಿದರು.

ADVERTISEMENT

ಪಕ್ಷದ ಕಾರ್ಯಕರ್ತರು ಪ್ರತಿ ಮತಗಟ್ಟೆಗಳಿಗೆತೆರಳುತ್ತಿದ್ದಾರೆ.ಇದೂವರೆಗೂ 79 ಸಾವಿರ ಮನೆಗಳಿಗೆ ಭೇಟಿ ನೀಡಿ, ಗಮನ ಸೆಳೆಯುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯ ಮಹತ್ವ ತಿಳಿಸಿದ್ದಾರೆ. ಮಹಿಳಾ ಮೋರ್ಚಾದಕಾರ್ಯಕರ್ತರು 141 ಕಾರ್ಯಕ್ರಮ ಮಾಡಿದ್ದಾರೆ. 48 ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ. ಪ್ರಧಾನಿ ಮೋದಿಅವರಿಗೆ ಪ್ರಬುದ್ಧರು ಪತ್ರಗಳನ್ನು ಬರೆದು, ಅಭಿನಂದನೆ ಸಲ್ಲಿಸಿದ್ದಾರೆ. 850ಕ್ಕೂ ಹೆಚ್ಚು ಪತ್ರಗಳನ್ನು ಜಿಲ್ಲೆಯಿಂದ ರವಾನಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದಡಿ.ಎಸ್.ಅರುಣ್, ದತ್ತಾತ್ರಿ, ಅನಿತಾ ರವಿಶಂಕರ್, ರತ್ನಾಕರ ಶೆಣೈ, ಅಣ್ಣಪ್ಪ, ಬಿಳಕಿ ಕೃಷ್ಣಮೂರ್ತಿ, ರುದ್ರೇಶ್, ಶಿವರಾಜ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.