ADVERTISEMENT

ಪುನೀತ್ ರಾಜಕುಮಾರ್ ಹುಟ್ಟು ಹಬ್ಬ ಮಾ.17ರಂದು

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2025, 18:07 IST
Last Updated 16 ಮಾರ್ಚ್ 2025, 18:07 IST
ಪುನೀತ್ ರಾಜಕುಮಾರ್
ಪುನೀತ್ ರಾಜಕುಮಾರ್   

ಭದ್ರಾವತಿ: ಕರ್ನಾಟಕ ರತ್ನ ದಿ.ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವನ್ನು ಶಾಸಕ ಬಿ.ಕೆ.ಸಂಗಮೇಶ್ ನೇತೃತ್ವದಲ್ಲಿ ಮಾ.17ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಹಳೇನಗರದ ನಿರ್ಮಲಾ ಆಸ್ಪತ್ರೆ ಎದುರಿನ ಕನಕ ಆಟೋ ನಿಲ್ದಾಣದ ಬಳಿಯ ಪುನೀತ್ ರಾಜ್‌ಕುಮಾ‌ರ್ ಪುತ್ತಳಿಗೆ ಮಾಲಾರ್ಪಣೆ ಸಲ್ಲಿಸಲಾಗುವುದು.

ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಾಲು-ಹಣ್ಣು- ಬ್ರೆಡ್ ವಿತರಣೆ ಕಾರ್ಯಕ್ರಮ ಇರಲಿದೆ ಎಂದು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT