ADVERTISEMENT

ಶಿವಮೊಗ್ಗ, ಮಂಗಳೂರು ನಡುವೆ ರೈಲ್ವೆ ಸಂಪರ್ಕಕ್ಕೆ ಪ್ರಸ್ತಾವ

ತೀರ್ಥಹಳ್ಳಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 14:44 IST
Last Updated 5 ಜನವರಿ 2019, 14:44 IST
ಬಿ.ವೈ. ರಾಘವೇಂದ್ರ
ಬಿ.ವೈ. ರಾಘವೇಂದ್ರ   

ತೀರ್ಥಹಳ್ಳಿ: ಶಿವಮೊಗ್ಗ, ಮಂಗಳೂರು ನಡುವೆ ರೈಲ್ವೆ ಸಂಪರ್ಕದ ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪಟ್ಟಣ ಪಂಚಾಯ್ತಿಯಲ್ಲಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಪಟ್ಟಣ ಪಂಚಾಯಿತಿ ಕಚೇರಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಶನಿವಾರ ಅವರು ಮಾತನಾಡಿದರು.

ಶಿವಮೊಗ್ಗ, ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ ಮಾರ್ಗವಾಗಿ ರೈಲು ಮಂಗಳೂರಿಗೆ ಸಂಚರಿಸುವ ಈ ಯೋಜನೆ ಅನುಷ್ಠಾನಗೊಳಿಸುವಂತೆ ಕೇಂದ್ರದ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಪ್ರಸ್ತಾವ ಸಲ್ಲಿಸಲಾಗಿದೆ. ಈ ಯೋಜನೆ ಅನುಷ್ಠಾನವಾದಲ್ಲಿ ಮಲೆನಾಡಿನ ಸಮಗ್ರ ಅಭಿವೃದ್ಧಿಗೆ ಅವಕಾಶ ಕಲ್ಪಿಸಿದಂತಾಗಲಿದೆ. ಈ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.