ADVERTISEMENT

ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2020, 13:03 IST
Last Updated 25 ಜುಲೈ 2020, 13:03 IST
ಮಳೆ ಸನ್ನಿವೇಶದ ಪ್ರಾತಿನಿಧಿಕ ಚಿತ್ರ
ಮಳೆ ಸನ್ನಿವೇಶದ ಪ್ರಾತಿನಿಧಿಕ ಚಿತ್ರ    

ಶಿವಮೊಗ್ಗ: ಜಿಲ್ಲೆಯ ಕೆಲವೆಡೆ ಶನಿವಾರ ಸಾಧಾರಣ ಮಳೆಯಾಗಿದೆ.

ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ ಭಾಗದಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿದೆ. ಶಿವಮೊಗ್ಗ, ಭದ್ರಾವತಿ ತಾಲ್ಲೂಕು ಸೇರಿದಂತೆ ಉಳಿದೆಡೆ ಮಳೆ ಬಿಡುವು ನೀಡಿದೆ.

ಲಿಂಗನಮಕ್ಕಿ, ಭದ್ರಾ, ತುಂಗಾ ಸೇರಿದಂತೆ ಪ್ರಮುಖ ಜಲಾಶಯಗಳ ಒಳ ಹರಿವಿನ ಪ್ರಮಾಣವೂ ಗಣನೀಯವಾಗಿ ಇಳಿಕೆಯಾಗಿದೆ. ಮೂರೂ ಜಲಾಶಯಗಳ ಸರಾಸರಿ ಒಳ ಹರಿವು 5 ಸಾವಿರಕ್ಕಿಂತ ಕಡಿಮೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.