ತೀರ್ಥಹಳ್ಳಿ: ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆ ತಾಲ್ಲೂಕಿನಲ್ಲಿ ಶುಕ್ರವಾರ ಕೊಂಚ ತಗ್ಗಿದೆ. ಆಗುಂಬೆಯಲ್ಲಿ 15.1 ಸೆಂ.ಮೀ. ಹಾಗೂ ತೀರ್ಥಹಳ್ಳಿ ಪಟ್ಟಣದಲ್ಲಿ 12.3 ಸೆಂ.ಮೀ. ಮಳೆ ಸುರಿದಿದೆ.
ತಾಲ್ಲೂಕಿನ ಜೀವನದಿಗಳಾದ ತುಂಗಾ, ಮಾಲತಿ, ಕುಶಾವತಿ ತುಂಬಿ ಹರಿಯುತ್ತಿವೆ. ಅಂಬುತೀರ್ಥದಲ್ಲಿ ಮನೆಯೊಂದರ ಚಾವಣಿ ಕುಸಿದಿದೆ.
ಮೂರು ದಿನಗಳಿಂದ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು, ಮೊಬೈಲ್ ನೆಟ್‌ವರ್ಕ್ ಸಂಪರ್ಕ ಕಡಿತಗೊಂಡಿದೆ.
ತಾಲ್ಲೂಕು ವ್ಯಾಪ್ತಿಯಲ್ಲಿ 4.38 ಗುಂಟೆ ಪ್ರದೇಶದ ಅಡಿಕೆ ಮರಕ್ಕೆ ಹಾನಿಯಾಗಿದೆ. ತೀರ್ಥಹಳ್ಳಿ ವಲಯದಲ್ಲಿ 217, ಬೆಜ್ಜವಳ್ಳಿ ವಲಯದಲ್ಲಿ 278 ವಿದ್ಯುತ್ ಕಂಬಗಳು ಉರುಳಿದ್ದು, ಒಟ್ಟು 72 ವಿದ್ಯುತ್ ಟ್ರಾನ್ಸ್‌ಫಾರ್ಮರ್ ಹಾಳಾಗಿವೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.