ADVERTISEMENT

ಮಡಿವಾಳ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಿ ರಾಜು ತಲ್ಲೂರು ನೇಮಕ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 7:14 IST
Last Updated 9 ನವೆಂಬರ್ 2022, 7:14 IST
ರಾಜು ತಲ್ಲೂರು
ರಾಜು ತಲ್ಲೂರು   

ಸೊರಬ: ಬಿಜೆಪಿ ಮುಖಂಡ ರಾಜು ಎಂ. ತಲ್ಲೂರು ಅವರನ್ನು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ.

ಈಚೆಗೆ ಕಾಂಗ್ರೆಸ್ ತೊರೆದು ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದ ರಾಜು ತಲ್ಲೂರು ಅವರು ಪಕ್ಷ ಸೇರಿ ಒಂದು ತಿಂಗಳಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದರು. ವಾರದ ಅಂತರದಲ್ಲಿ ಅವರನ್ನು ಸರ್ಕಾರ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಡಿರುವುದು ಅವರ ಅಭಿಮಾನಿ
ಗಳಲ್ಲಿ ಸಂತಸ ತಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT