ADVERTISEMENT

ರಾಜ್ಯಸಭೆಯ 3 ಸ್ಥಾನಗಳನ್ನು ಉಳಿಸಿಕೊಳ್ಳಲು ಬಿಜೆಪಿ ತಂತ್ರ

​ಪ್ರಜಾವಾಣಿ ವಾರ್ತೆ
Published 22 ಮೇ 2022, 2:47 IST
Last Updated 22 ಮೇ 2022, 2:47 IST

ಶಿವಮೊಗ್ಗ: ರಾಜ್ಯಸಭೆಯ 3 ಸ್ಥಾನಗಳನ್ನೂ ಉಳಿಸಿಕೊಳ್ಳುವ ಕುರಿತು ಬಿಜೆಪಿಯಲ್ಲಿ ಚಿಂತನೆ ನಡೆದಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ರಾಜ್ಯದಿಂದ ರಾಜ್ಯಸಭೆಗೆ ಇಬ್ಬರು ಸದಸ್ಯರ ಆಯ್ಕೆ ಖಚಿತವಾಗಿದೆ. ಮೂರನೇ ಸದಸ್ಯರ ಆಯ್ಕೆ ಬಗ್ಗೆ ಚಿಂತನೆ ನಡೆದಿದೆ. ಜೆಡಿಎಸ್ ಬೆಂಬಲ ಕೋರುವ ಕುರಿತು ಚಿಂತನೆ ನಡೆದಿದೆ’ ಎಂದರು.

ADVERTISEMENT

ಶಿವಮೊಗ್ಗದಲ್ಲಿ ವಾಡಿಕೆಗಿಂತ ನಾಲ್ಕು ಪಟ್ಟು ಅಧಿಕ ಮಳೆ ಒಂದೇ ದಿನದಲ್ಲಿ ಸುರಿದಿದೆ. ಹಲವು ಕಡೆ ಸಾರ್ವಜನಿಕರಿಗೆ ಸಮಸ್ಯೆಗಳಾಗಿವೆ. ಸಂತ್ರಸ್ತರಿಗೆ ಆಹಾರ ವಿತರಣೆ ಮಾಡಲಾಗುತ್ತಿದೆ. ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಭಾಗಶಃ ಹಾನಿಯಾದ ಮನೆಗಳು ಬೀಳುವ ಸಂಭವವಿರುವುದರಿಂದ ಎರಡು ದಿನ ಬಿಟ್ಟು ಸಂಪೂರ್ಣ ನಷ್ಟದ ಅಂದಾಜನ್ನು ಅಧಿಕಾರಿಗಳು ಸಲ್ಲಿಸಲಿದ್ದಾರೆ ಎಂದರು.

ಸ್ಮಾರ್ಟ್‌ ಸಿಟಿ ಕಾಮಗಾರಿ ಸಂದರ್ಭದಲ್ಲಿ ಕೆಲವು ಕಡೆ ನೀರು ಹರಿದು ಹೋಗುವ ಪೈಪ್‌ಗಳಲ್ಲಿ ಕಸ ತುಂಬಿದ್ದರಿಂದ ನೀರು ಹರಿಯದೇ ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಇನ್ನೊಂದು ವಾರದಲ್ಲಿ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್, ತಹಶೀಲ್ದಾರ್ ನಾಗರಾಜ್, ಮೇಯರ್ ಸುನಿತಾ ಅಣ್ಣಪ್ಪ, ‘ಸೂಡಾ’ ಅಧ್ಯಕ್ಷ ನಾಗರಾಜ್, ಪಾಲಿಕೆ ಸದಸ್ಯ ಎಸ್‌.ಎನ್‌.ಚನ್ನಬಸಪ್ಪ, ‘ಸ್ಮಾರ್ಟ್‌ ಸಿಟಿ’ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ, ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.