ಹೊಸನಗರ: ‘ನಮ್ಮ ಸೋಲು–ಗೆಲುವುಗಳನ್ನು ನಿರ್ಧರಿಸುವ ಶಕ್ತಿ ಮೇಲಿದೆ. ಪರೀಕ್ಷೆ ಎದುರಿಸುವ ಮನಃಸ್ಥಿತಿ ಮಾತ್ರ ನಮ್ಮದಾಗಬೇಕು. ಪ್ರತಿ ವ್ಯಕ್ತಿಯ ಜೀವನದಲ್ಲಿ ಸವಾಲು ಎದುರಿಸಿದಾಗ ಮಾತ್ರವೇ ಯಶಸ್ಸು ಸಾಧ್ಯ ಎಂದು ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ರಾಮಚಂದ್ರಾಪುರ ಮಠದಲ್ಲಿ ನಡೆದ ರಾಮೋತ್ಸವ ಸಮಾರೋಪ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಇದಕ್ಕೂ ಮುನ್ನ, ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಭಾಗವಹಿಸಿದ್ದರು. ಶ್ರೀರಾಮಪಟ್ಟಾಭಿಷೇಕ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಉದ್ಯಮಿ ಪ್ರಕಾಶ್ ಕೋಣಂದೂರು, ರಾಮೋತ್ಸವ ಸಮಿತಿಯ ಅಧ್ಯಕ್ಷ ಗಣಪತಿ ಜಟ್ಟಿಮನೆ, ವ್ಯವಸ್ಥಾಪಕ ರಾಘವೇಂದ್ರ ಮಧ್ಯಸ್ಥ, ಗಣಪತಿ ಭಟ್ ಗುಂಜಗೋಡು, ರಾಮೋತ್ಸವ ಸಮಿತಿ ಮತ್ತು ಮಹಾಮಂಡಲದ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.