ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; 20 ವರ್ಷ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 15:32 IST
Last Updated 24 ಜನವರಿ 2024, 15:32 IST
<div class="paragraphs"><p>ಜೈಲು </p></div>

ಜೈಲು

   

ಶಿವಮೊಗ್ಗ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ₹2.20 ಲಕ್ಷ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದರೆ 6 ತಿಂಗಳು ಸಾದಾ ಸೆರೆವಾಸ ಶಿಕ್ಷೆ ನೀಡಿ ಆದೇಶಿಸಿದೆ.

ದಂಡದ ಮೊತ್ತದಲ್ಲಿ ₹2 ಲಕ್ಷವನ್ನು  ಪರಿಹಾರವಾಗಿ ಯುವತಿಗೆ ಪಾವತಿಸುವಂತೆ ಸೂಚಿಸಿದೆ. 

ADVERTISEMENT

2021ರಲ್ಲಿ ದಾವಣಗೆರೆ ಮೂಲದ 27 ವರ್ಷದ ಯುವಕ, 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಯುವತಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 

ಆಗಿನ ಭದ್ರಾವತಿ ಪೊಲೀಸ್ ಠಾಣೆಯ ಪಿಐ ಚೈತನ್ಯ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಹರಿಪ್ರಸಾದ್ ಮತ್ತು ಶ್ರೀಧರ್ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಎಸ್.ಮೋಹನ್, ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.