ADVERTISEMENT

ಶಿವಮೊಗ್ಗ: ‘ಮುಸ್ಲಿಂ 2 ‘ಬಿ’ ಮೀಸಲಾತಿ ಪುನರ್ ಸ್ಥಾಪಿಸಿ’: ಪ್ರತಿಭಟನೆ

ಎಸ್‌ಡಿಪಿಐ ಖಂಡನೆ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 4:52 IST
Last Updated 29 ಮಾರ್ಚ್ 2023, 4:52 IST
ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.
ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.   

ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ, ಮಂಗಳವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

‘ಈ ಹಿಂದಿನ ಸರ್ಕಾರಗಳು ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗ ಎಂದು ವರದಿ ನೀಡಿದ್ದವು. ಅದರ ಅನ್ವಯ ಸಂವಿಧಾನದ ಅಡಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಬೇಕು ಎನ್ನುವ ನಿಯಮವಿದೆ. ಆದರೆ ಮುಸ್ಲಿಮರು ಎನ್ನುವ ಕಾರಣಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಮುಸ್ಲಿಮರಿಗೆ ಇರಿಸಿದ್ದ ಶೇ 4 ರಷ್ಟು ಮೀಸಲಾತಿಯನ್ನು ಮೊಟಕುಗೊಳಿಸುವ ಮೂಲಕ ಕೋಮುವಾದಿತನ ತೋರಿದೆ’ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಇಮ್ರಾನ್ ಆರೋಪಿಸಿದರು.

ಸಮುದಾಯದ ಸಬಲೀಕರಣಕ್ಕೆ ಸಹಕರಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗು
ವುದು’ ಎಂದು ಎಚ್ಚರಿಸಿದರು. ಇರ್ಫಾನ್, ಜಬೀವುಲ್ಲಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.