ADVERTISEMENT

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುಣ್ಯಸ್ಮರಣೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2022, 5:36 IST
Last Updated 27 ಡಿಸೆಂಬರ್ 2022, 5:36 IST
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 11ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸೊರಬದ ಬಂಗಾರ ಧಾಮದಲ್ಲಿರುವ ಅವರ ಸಮಾಧಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಅಧ್ಯಕ್ಷ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 11ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸೊರಬದ ಬಂಗಾರ ಧಾಮದಲ್ಲಿರುವ ಅವರ ಸಮಾಧಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಅಧ್ಯಕ್ಷ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು.   

ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 11ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಪಟ್ಟಣದ ಬಂಗಾರ ಧಾಮದಲ್ಲಿರುವ ಸಮಾಧಿಗೆ ಅವರ ಪುತ್ರ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಅಧ್ಯಕ್ಷ ಮಧು ಬಂಗಾರಪ್ಪ ಅವರು ಪಕ್ಷದ ಮುಖಂಡರು ಹಾಗೂ ಸಂಬಂಧಿಗಳೊಂದಿಗೆ ಬಂದು ಪೂಜೆ ಸಲ್ಲಿಸಿದರು.

‘ಬಂಗಾರಪ್ಪ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಡವರು, ಹಿಂದುಳಿದ ವರ್ಗಗಳು, ರೈತರ ಪರವಾದ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದರು. ಅವು ಇಂದಿಗೂ ಜನಮಾನಸದಲ್ಲಿ ಉಳಿದಿವೆ. ಅವರ ರಾಜಕೀಯ ಆದರ್ಶವನ್ನು ನನ್ನ ಜೀವನದಲ್ಲಿ ಅಳವಡಿಸಿಕೊಂಡು ಜನ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್‌ನ ಕಾರವಾರ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ. ಅಣ್ಣಪ್ಪ ಹಾಲಘಟ್ಟ, ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ಮುಖಂಡರಾದ ಎಚ್. ಗಣಪತಿ, ಎನ್.ಜಿ. ನಾಗರಾಜ್, ಭಾಸ್ಕರ್ ಬರಗಿ, ರವಿ ಬರಗಿ, ಸಂಜೀವ ನೇರಲಿಗೆ, ಹಬೀಬುಲ್ಲಾ ಹವಾಲ್ದಾರ್, ಜಗದೀಶ್ ಕುಪ್ಪೆ, ಕುಮಾರಸ್ವಾಮಿ, ಯು. ಫಯಾಜ್ ಅಹಮ್ಮದ್, ಸಂತೋಷ್ ಕೊಡಕಣಿ, ಶ್ರೀಕಾಂತ ಚಿಕ್ಕಶಕುನ, ಪಾಂಡು ಕೊಡಕಣಿ, ಸಂಜಯ್ ದೇವತಿಕೊಪ್ಪ, ಮೋಹನ ಕುಪ್ಪೆ, ರವಿಕುಮಾರ್ ಶೆಟ್ಟಿ, ಲಕ್ಷ್ಮಣಪ್ಪ, ನಾಗಪ್ಪ ಮಾಸ್ತರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.