ADVERTISEMENT

ಹಸೂಡಿ ಕ್ಯಾಂಪ್‌ಗೆ ಆಹಾರ ಪೂರೈಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 12:22 IST
Last Updated 3 ಜೂನ್ 2020, 12:22 IST
ಶಿವಮೊಗ್ಗದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಸೀಲ್‌ಡೌನ್ ಆಗಿರುವ ಹಕ್ಕಿಪಿಕ್ಕಿ ಕ್ಯಾಂಪ್, ಹರಪ್ಪನಹಳ್ಳಿ ಕ್ಯಾಂಪ್ ಗ್ರಾಮಸ್ಥರಿಗೆ ಆಹಾರ ಸಾಮಾಗ್ರಿ ವಿತರಿಸಬೇಕು ಎಂದು ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ: ಹಕ್ಕಿಪಿಕ್ಕಿ ಕ್ಯಾಂಪ್ ಹಾಗೂ ಹರಪ್ಪನಹಳ್ಳಿ ಕ್ಯಾಂಪ್ ಗ್ರಾಮಸ್ಥರಿಗೆ ಆಹಾರ ಸಾಮಾಗ್ರಿ ವಿತರಿಸಬೇಕು.ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪಂಚಾಯಿತಿಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಬುಧವಾರಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪಂಜಾಬ್‌ನಿಂದ ಹಿಂದಿರುಗಿದ ಹಕ್ಕಿಪಿಕ್ಕಿ ಕ್ಯಾಂಪ್‌ನ ಮೂವರಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮ ಹಸೂಡಿ ಹಕ್ಕಿಪಿಕ್ಕಿ ಕ್ಯಾಂಪ್, ಹರಪ್ಪನಹಳ್ಳಿ ಕ್ಯಾಂಪ್‌ಗಳನ್ನುಸೀಲ್‌ಡೌನ್ ಮಾಡಲಾಗಿದೆ.ಇದರಿಂದ ಈ ಎರಡೂ ಗ್ರಾಮಗಳ ಜನರು ಅಕ್ಷರಶಃ ಬಂಧಿಗಳಾಗಿದ್ದಾರೆ.ಯಾರೂ ಹೊರಗೆ ಬರುವ ಹಾಗಿಲ್ಲ. ಹಾಗಾಗಿ, ಅವರ ಜೀವನ ನಿರ್ವಹಣೆ ತುಂಬಾ ಕಷ್ಟವಾಗಿದೆ. ಇಂತಹ ಸಂದಿಗ್ಧಸಮಯದಲ್ಲಿ ಅಗತ್ಯ ಜೀವನಾವಶ್ಯಕ ಸಾಮಾಗ್ರಿ ತಲುಪಿಸಬೇಕು ಎಂದು ಒತ್ತಾಯಿಸಿದರು.

ಅಲ್ಲಿನ ಜನರಿಗೆ ಆಹಾರ ಸಾಮಾಗ್ರಿಗಳು ತಲುಪಬೇಕು. ಅಲ್ಲಿ ಮೂಲ ಸೌಲಭ್ಯಗಳ ಕೊರತೆ ಇದೆ. ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಮನವಿಯಲ್ಲಿ ಆಗ್ರಹಿಸಿದರು.

ADVERTISEMENT

ಹಾಪ್‌ಕಾಮ್ಸ್‌ ನಿರ್ದೇಶಕ ವಿಜಯಕುಮಾರ್, ಜಗದೀಶ್, ಮಂಜುನಾಥ್, ರಮೇಶ್, ಶಶಿಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.