ಪ್ರಾತಿನಿಧಿಕ ಚಿತ್ರ
ಶಿವಮೊಗ್ಗ: ‘ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ಆಯೋಗ ವರದಿಯಲ್ಲಿ ಕೊರಚ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಒಳ ಮೀಸಲಾತಿಯನ್ನು ಪುನರ್ ಪರಿಶೀಲಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು’ ಎಂದು ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬನ್ನೂರು ಸುರೇಶ್ ಒತ್ತಾಯಿಸಿದರು.
‘2011ರ ಜನಗಣತಿಯ ಪ್ರಕಾರ ಕೊರಚ ಸಮುದಾಯದ ಜನಸಂಖ್ಯೆ 1 ಲಕ್ಷಕ್ಕಿಂತ ಕಡಿಮೆ ಇದೆ. ಆದ್ದರಿಂದ, ಅಲೆಮಾರಿ ಪರಿಶಿಷ್ಟ ಜಾತಿಗಳನ್ನು ಒಂದು ಗುಂಪು ಮಾಡಿ, ಶೇ 2ರಷ್ಟು ಮೀಸಲಾತಿ ಕಲ್ಪಿಸಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
‘ಕೊರಚ ಸಮುದಾಯದ ಕುಲಶಾಸ್ತ್ರ ಅಧ್ಯಯನವಾಗಿಲ್ಲ. ಆದರೂ ಸಹ ಸಮಾನಂತರ ಜಾತಿಗಳೆಂದು ನಮ್ಮನ್ನು ಬೇರೊಂದು ಜಾತಿಯೊಂದಿಗೆ ಸೇರಿಸಿರುವುದು ಸಮಾಜಕ್ಕೆ ಮಾಡಿರುವ ದ್ರೋಹ’ ಎಂದರು.
‘ಕೊರಚ ಸಮುದಾಯದಲ್ಲಿ ರಾಜಕೀಯವಾಗಿ ಯಾವುದೇ ಉನ್ನತ ಸ್ಥಾನಮಾನ ದೊರಕಿಲ್ಲ. ಇದೊಂದು ಅಸಂಘಟಿತ ಸಮಾಜವಾಗಿದ್ದು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕವಾಗಿಯೂ ಸಮಾಜ ಹಿಂದುಳಿದಿದೆ’ ಎಂದು ರಾಜ್ಯ ಸಂಘದ ಗೌರವಾಧ್ಯಕ್ಷ ಸಿ. ಜಯಪ್ಪ ಹೇಳಿದರು.
ಕೊರಚ ಮಹಾಸಂಘ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಕೆ.ಎನ್. ಪ್ರಭು, ಈಶ್ವರಪ್ಪ ಮೈದೋಳು, ಜಗದೀಶ್, ಪ್ರಸನ್ನ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.