ಸಾವು
ಪ್ರಾತಿನಿಧಿಕ ಚಿತ್ರ
ರಿಪ್ಪನ್ ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆಯಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕರಡಿಗ ಗ್ರಾಮದ ಬೆಳಕೋಡು ನಿವಾಸಿ ಲೋಕೇಶ್ (45) ಮೃತರು.
ತಮ್ಮ ಪತ್ನಿಯ ತವರುಮನೆ ಹುಂಚದಕಟ್ಟೆಗೆ ತೆರಳಿದ್ದ ಅವರು, ಭಾನುವಾರ ಬೆಳಿಗ್ಗೆ ಒಬ್ಬರೇ ಸೊಪ್ಪು ತರಲು ಕಾಡಿಗೆ ಹೋಗಿದ್ದರು. ಅವರು ವಾಪಸ್ ಬಾರದ ಕಾರಣ, ಮನೆಯವರೆಲ್ಲ ಹುಡುಕಾಡಿದರು. ಕೆರೆಯಲ್ಲಿ ಕಾಲುಜಾರಿ ಬಿದ್ದಿರುವುದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.