ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ ನಾಗರಹಳ್ಳಿ ನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 2ರಂದು ನಾಗೇಂದ್ರ ಸ್ವಾಮಿಯ 14ನೇ ವರ್ಷದ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಮತ್ತು ಶಂಕರಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮಗಳು ಜರುಗಲಿವೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೇರುಗಲ್ಲು ಸತೀಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 6ಕ್ಕೆ ನಾಗೇಂದ್ರ ಸ್ವಾಮಿಯ ಪ್ರತಿಷ್ಠಾವರ್ಧಂತಿ ಉತ್ಸವ ಅಂಗವಾಗಿ ಸ್ವಾಮಿಗೆ ನಿತ್ಯ ಪೂಜೆ ಸಹಿತ, ಮೂಲಮಂತ್ರ ಹೋಮ, ಪಂಚವಿಂಶತಿ ಕುಂಭಾಭಿಷೇಕ ವಿಶೇಷ ಪೂಜಾ ಕೈಂಕರ್ಯ ಹಾಗೂ ಸ್ವಾಮಿಯ ಮಹಾದ್ವಾರ ಕಳಶ ಪ್ರತಿಷ್ಠಾಪನೆ ಮತ್ತು ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮಗಳು ನೆರವೇರಲಿವೆ.
ವಿಶೇಷ ಪೂಜೆಯೊಂದಿಗೆ ಸ್ವಾಮಿಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ನಂತರ ಸಾಮೂಹಿಕ ಅನ್ನ ಸಂತರ್ಪಣೆ ಜರುಗಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸುವಂತೆ ಸಮಿತಿಯವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.