ADVERTISEMENT

ಸಮಾಜದ ಋಣ ತೀರಿಸುವ ಕೆಲಸ ಮಾಡಿ: ಅಕ್ಷರ ಸಂತ ಹಾಜಬ್ಬ ಹರೇಕಳ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 7:39 IST
Last Updated 28 ನವೆಂಬರ್ 2021, 7:39 IST
ರಿಪ್ಪನ್‌ಪೇಟೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಆಟೊ ಚಾಲಕರು ಮತ್ತು ಮಾಲೀಕರು ತಮ್ಮ ವಾಹನಗಳಿಗೆ ಕನ್ನಡದ ಬಾವುಟಗಳನ್ನು ಕಟ್ಟಿಕೊಂಡು ಸಾಗಿದರು (ಎಡಚಿತ್ರ). ಶಿಕಾರಿಪುರಕ್ಕೆ ಶನಿವಾರ ಭೇಟಿ ನೀಡಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಡಾ.ಮೌಲಾನಾ ಅಮ್ಜದ್ ಹುಸೇನ್ ಕರ್ನಾಟಕಿ ಅಭಿನಂದಿಸಿ ಸನ್ಮಾನಿಸಿದರು. ತಾಲ್ಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೆ.ಎಸ್. ಹುಚ್ಚರಾಯಪ್ಪ, ಮುಸ್ಲಿಂ ಮುಖಂಡ ಮೊಹಮದ್ ಹನೀಫ್ ಇದ್ದರು.
ರಿಪ್ಪನ್‌ಪೇಟೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಆಟೊ ಚಾಲಕರು ಮತ್ತು ಮಾಲೀಕರು ತಮ್ಮ ವಾಹನಗಳಿಗೆ ಕನ್ನಡದ ಬಾವುಟಗಳನ್ನು ಕಟ್ಟಿಕೊಂಡು ಸಾಗಿದರು (ಎಡಚಿತ್ರ). ಶಿಕಾರಿಪುರಕ್ಕೆ ಶನಿವಾರ ಭೇಟಿ ನೀಡಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಡಾ.ಮೌಲಾನಾ ಅಮ್ಜದ್ ಹುಸೇನ್ ಕರ್ನಾಟಕಿ ಅಭಿನಂದಿಸಿ ಸನ್ಮಾನಿಸಿದರು. ತಾಲ್ಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೆ.ಎಸ್. ಹುಚ್ಚರಾಯಪ್ಪ, ಮುಸ್ಲಿಂ ಮುಖಂಡ ಮೊಹಮದ್ ಹನೀಫ್ ಇದ್ದರು.   

ರಿಪ್ಪನ್‌ಪೇಟೆ: ಬದುಕಿನಲ್ಲಿ ಸಾರ್ಥಕತೆ ಕಾಣಲು ಸಮಾಜದಿಂದ ಏನನ್ನೂ ನಿರೀಕ್ಷೆ ಮಾಡದೆ, ಶ್ರೀಮಂತಿಕೆಯನ್ನು ತೊರೆದು, ಸರಳವಾಗಿ ಬದುಕಿ ಸಮಾಜಮುಖಿ ಚಿಂತನೆಯನ್ನು ಮೈಗೂಡಿಸಿಕೊಂಡು ತಮ್ಮ ಕೈಲಾದ ಸೇವೆಯನ್ನು ಸಮಾಜಕ್ಕೆ ಮುಡಿಪಾಗಿಸಿ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹಾಜಬ್ಬ ಹರೇಕಳ ಅವರು ಅಭಿಪ್ರಾಯಪಟ್ಟರು.

ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‌ಕುಮಾರ್‌ ಅಭಿಮಾನಿ ಬಳಗ ಆಯೋಜಿಸಿದ್ದ 66ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‌ಕುಮಾರ್‌ಗೆ ನುಡಿನಮನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ಈ ಮಾತೃ ಭೂವಿಯ ಋಣ ತೀರಿಸಲು, ಬಾಲ್ಯದಲ್ಲಿಯೇ ಗುಣಾತ್ಮಕ ಶಿಕ್ಷಣದೊಂದಿಗೆ ಸನ್ಮಾರ್ಗದಲ್ಲಿ ಸಾಗಿ, ಬದುಕೆಂಬ ಮೂರು ದಿನದ ಸಂತೆಯಲ್ಲಿ‘ನಾವು ಕಳೆದುಹೋಗುವ ಮುನ್ನ ನಿಸ್ವಾರ್ಥ ಸೇವೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದೇ ನಿಜವಾದ ಬದುಕು’ ಎಂದರು.

ADVERTISEMENT

ಮಾಜಿ ಶಾಸಕ ಗೋಪಾಲ ಕೃಷ್ಣ ಬೇಳೂರು, ‘ಕನ್ನಡ ನಮ್ಮ ಸ್ವಾಭಿಮಾನದ ಸಂಕೇತ. ಈ ಭಾಷೆಯ ಸಂರಕ್ಷಣೆ ಮಾಡುವ ಹೊಣೆಗಾರಿಕೆ ಯುವ ಶಕ್ತಿಯ ಕೈಯಲ್ಲಿದೆ. ನೆಲ–ಜಲ–ಭಾಷೆಗೆ ದಕ್ಕೆಯಾದಲ್ಲಿ ಕನ್ನಡಿಗರೆಲ್ಲರೂ ಸಂಘಟಿತರಾಗಿ ಹೋರಾಟಕ್ಕೆ ಅಣಿಯಾಗಬೇಕು’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳ ಕೇತಾರ್ಜಿ ರಾವ್‌ ಅವರು ತಾಯಿ ಭುವನೇಶ್ವರಿ ಭಾವಚಿತ್ರದ ರಾಜಬೀದಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿದರು

ನಂತರ ಮಾತನಾಡಿ, ‘ಕನ್ನಡ ನಿತ್ಯೋತ್ಸವವಾಗಲಿ. ನಾಡು ನುಡಿಯ ಬಗ್ಗೆ ಅರಿವು ಮೂಡಿಸುವ ಸಂಘಟನೆಗಳ ಕಾರ್ಯ ಅವಿಸ್ಮರಣೀಯ’ ಎಂದರು.

ಮೆರವಣಿಗೆಯಲ್ಲಿ ಪುಟಾಣಿ ಮಕ್ಕಳು ಕನ್ನಡ ನಾಡು ನುಡಿಗೆ ಶ್ರಮಿಸಿದ ಮಹನೀಯರ ವೇಷ ಭೂಷಣಗಳನ್ನು ತೊಟ್ಟಿದ್ದರು. ಆಟೊ ಚಾಲಕರು, ಮಾಲೀಕರು ತಮ್ಮ ವಾಹನಗಳನ್ನು ಶೃಂಗರಿಸಿ ಮೆರವಣಿಗೆಗೆ ಮೆರುಗು ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಹಾಜಬ್ಬ ಹರೇಕಳ ಅವರನ್ನು ವಿನಾಯಕ ವೃತ್ತದಿಂದ ಮೆರವಣೆಗೆಯಲ್ಲಿ ವೇದಿಕೆಗೆ ಕರೆ ತರಲಾಯಿತು.

ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿ ಬಳಗದ ಅಧ್ಯಕ್ಷ ಆರ್.ಎ. ಚಾಬುಸಾಬ್‌ ಕನ್ನಡ ಧ್ವಜಾರೋಹಣ ನೇರವೇರಿಸಿದರು. ಟಿ.ಆರ್. ಕೃಷ್ಣಪ್ಪ, ಆರ್.ಎನ್. ಮಂಜುನಾಥ್, ಪದ್ಮಸುರೇಶ್, ಜಿ.ಆರ್. ಗೋಪಾಲಕೃಷ್ಣ, ಎನ್. ವರ್ತೇಶ್‌, ಮಂಜಪ್ಪ,ಮೆಣಸೆ ಆನಂದ, ಎಂ.ಎಂ. ಪರಮೇಶ್, ಅಮೀರ್ ಹಂಜಾ, ಪಿಯೂಸ್‌ ರೋಡ್ರಿಗಸ್, ಆರ್.ಡಿ. ಶೀಲಾ, ಉಲ್ಲಾಸ್ ತೆಂಕೋಲು, ವಾಸು, ದೇವರಾಜ್,ಚೋಳರಾಜ್, ಹನೀಫ್‌, ಹಸನಬ್ಬ, ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.