ADVERTISEMENT

ಹೊಸನಗರ | ರಾಡ್‌ನಿಂದ ಹಲ್ಲೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ಗಲಾಟೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 4:53 IST
Last Updated 23 ಜುಲೈ 2025, 4:53 IST
<div class="paragraphs"><p>ಯುವಕನಿಗೆ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವುದು</p></div>

ಯುವಕನಿಗೆ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವುದು

   

ಹೊಸನಗರ: ಮದ್ಯದ ವಿಚಾರವಾಗಿ ನಡು ರಸ್ತೆಯಲ್ಲೇ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹೊಸನಗರ ತಾಲ್ಲೂಕು ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮೀಶ ಎಂಬಾತ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ADVERTISEMENT

ಘಟನೆ ವಿವರ?: ತುಂಬೆಗದ್ದೆ ಗ್ರಾಮದ ಲಕ್ಷ್ಮೀಶ ರಾತ್ರಿ 10 ಗಂಟೆ ಹೊತ್ತಿಗೆ ಸಂಪೆಕಟ್ಟೆಯ ಅಂಗಡಿಗೆ ತೆರಳಿದ್ದರು. ಈ ವೇಳೆ ಜೀಪ್‌ನಲ್ಲಿ ಬಂದ ಸುಬ್ರಹ್ಮಣ್ಯ, ಅವಿನಾಶ, ರಾಘವೇಂದ್ರ ಎಂಬವರು ಮದ್ಯ ಕೊಡಿಸುವಂತೆ ಲಕ್ಷ್ಮೀಶನಿಗೆ ಹೇಳಿದರು. ಲಕ್ಷ್ಮೀಶ ನಿರಾಕರಿಸಿದಾಗ ಆತನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ರಾಡ್‌ನಿಂದ ಲಕ್ಷ್ಮೀಶನ ತಲೆಗೆ ಹೊಡೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಹೊಸನಗರ ತಾಲ್ಲೂಕು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.