ADVERTISEMENT

ಮೀಟರ್ ಅಳವಡಿಸದ ಆಟೊರಿಕ್ಷಾ ವಿರುದ್ಧ ಕ್ರಮ: ಡಿಸಿ ಕೆ.ಎ.ದಯಾನಂದ ಎಚ್ಚರಿಕೆ

ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ

​ಪ್ರಜಾವಾಣಿ ವಾರ್ತೆ
Published 20 ಮೇ 2019, 13:14 IST
Last Updated 20 ಮೇ 2019, 13:14 IST

ಶಿವಮೊಗ್ಗ: ಆಟೊರಿಕ್ಷಾಗಳಿಗೆಮೀಟರ್‌ ಅಳವಡಿಸುವುದು ಕಡ್ಡಾಯ. ಮೀಟರ್ ಹಾಕದೇ ಪ್ರಯಾಣಿಕರಿಂದ ಹೆಚ್ಚಿನ ಹಣವಸೂಲಿ ಮಾಡುವ ಚಾಲಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದಎಚ್ಚರಿಸಿದರು.

ಸೋಮವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಯಾಣಿಕರು ಹೇಳಿದರೆ ಮಾತ್ರ ಅಟೊರಿಕ್ಷಾಚಾಲಕರು ಮೀಟರ್ ಹಾಕುವಂತಹ ಪರಿಪಾಠವಿದೆ. ಇದು ಸಲ್ಲದು. ಕಡ್ಡಾಯವಾಗಿ ಪ್ರತಿ ಬಾರಿ ಮೀಟರ್ ಹಾಕಬೇಕು. ಎಲ್ಲಾ ಅಟೊಗಳಲ್ಲೂ ಚಾಲಕನ ಹೆಸರು, ವಿಳಾಸ, ಛಾಯಾಚಿತ್ರ, ವಿವರಇರುವಮಾಹಿತಿ ಫಲಕ ಅಳವಡಿಸಬೇಕು. ಹೊಸಆಟೊರಿಕ್ಷಾಗಳನ್ನು ನಿಯಂತ್ರಿಸುವ ಉದ್ದೇಶವಿದ್ದು, ನೋಂದಣಿಗೆ ಅನುಮತಿ ನೀಡುವ ಮೊದಲು ಸಮಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಕುರಿತು ಪರಿಶೀಲಿಸಲಾಗುವುದು ಎಂದರು.

ADVERTISEMENT

ಎಲೆಕ್ಟ್ರಿಕಲ್ ಅಟೊ ರಿಕ್ಷಾಗಳಿಗೆಅನುಮತಿ:

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಪೂರಕವಾಗಿ ಎಲೆಕ್ಟ್ರಿಕಲ್ ಅಟೊರಿಕ್ಷಾಗಳಿಗೆ ಪ್ರಾಯೋಗಿಕವಾಗಿ ಅನುಮತಿ ನೀಡಲಾಗುವುದು.ರೈಲುನಿಲ್ದಾಣದಲ್ಲಿ ಮುಂಗಡ ಪಾವತಿ ಕೌಂಟರ್ ಆರಂಭಿಸಲು ಅನುಮತಿ ನೀಡಲಾಗಿದೆ. ರೈಲುನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಿನಿ ಬಸ್ ಸೇವೆ ಆರಂಭಿಸಲು ಅನುಮತಿ ನೀಡಲಾಗುವುದು ಎಂದುಮಾಹಿತಿ ನೀಡಿದರು.

ಹಿರಿಯ ನಾಗರಿಕರ ಗುರುತಿನ ಚೀಟಿ ತೋರಿಸಿದರೂ ಕೆಲವು ಖಾಸಗಿ ಬಸ್‍ಗಳಲ್ಲಿ ರಿಯಾಯಿತಿ ನೀಡಲು ನಿರಾಕರಿಸಿರುವ ಬಗ್ಗೆ ದೂರು ಸ್ವೀಕರಿಸಲಾಗಿದೆ.ಅಂತಹ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಬೇಕು. ಎಲ್ಲಾ ಬಸ್ ನಿಲ್ದಾಣಗಳಲ್ಲಿ ಅಂಗವಿಕಲ ಪ್ರಯಾಣಿಕರಿಗಾಗಿ ರ್‍ಯಾಂಪ್ ಹಾಗೂ ಗಾಲಿಕುರ್ಚಿ ವ್ಯವಸ್ಥೆ ಕಲ್ಪಿಸಬೇಕುಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ, ಪ್ರಾದೇಶಿಕ ಸಾರಿಗೆ ಜಂಟಿ ಆಯುಕ್ತ ಶಿವರಾಜ ಪಾಟೀಲ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.