ADVERTISEMENT

ದಸರಾ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2022, 4:45 IST
Last Updated 18 ಸೆಪ್ಟೆಂಬರ್ 2022, 4:45 IST
ಶಿವಮೊಗ್ಗದಲ್ಲಿ ಶನಿವಾರ ನಾಡಹಬ್ಬ ದಸರಾ ಪ್ರಯುಕ್ತ ಮಹಿಳಾ ದಸರಾ ಕ್ರೀಡಾಕೂಟಕ್ಕೆ ಮೇಯರ್ ಸುನಿತಾ ಅಣ್ಣಪ್ಪ ಚಾಲನೆ ನೀಡಿದರು.
ಶಿವಮೊಗ್ಗದಲ್ಲಿ ಶನಿವಾರ ನಾಡಹಬ್ಬ ದಸರಾ ಪ್ರಯುಕ್ತ ಮಹಿಳಾ ದಸರಾ ಕ್ರೀಡಾಕೂಟಕ್ಕೆ ಮೇಯರ್ ಸುನಿತಾ ಅಣ್ಣಪ್ಪ ಚಾಲನೆ ನೀಡಿದರು.   

ಶಿವಮೊಗ್ಗ: ನಾಡಹಬ್ಬ ದಸರಾ ಪ್ರಯುಕ್ತ ಈ ಬಾರಿ ಮಹಿಳಾ ದಸರಾ ಅತ್ಯಂತ ಅದ್ಧೂರಿಯಿಂದ ನಾಲ್ಕು ದಿನಗಳ ಕಾಲ ಆಚರಿಸಲಾಗುತ್ತಿದೆ. ಹೀಗಾಗಿ ಶನಿವಾರ ನಗರದ ಎನ್ಇಎಸ್ ಮೈದಾನದಲ್ಲಿ ಮಹಿಳಾ ದಸರಾ ಕ್ರೀಡಾಕೂಟಕ್ಕೆ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಚಾಲನೆ ನೀಡಿದರು.

ವೇಗದ ನಡಿಗೆ ಸೇರಿದಂತೆ ಹಲವು ಕ್ರೀಡಾ ಸ್ಪರ್ಧೆಗಳಲ್ಲಿ ಪಾಲಿಕೆಯ ಮಹಿಳಾ ಸದಸ್ಯರು ಭಾಗವಹಿಸಿದ್ದರು.

ಶಿವಮೊಗ್ಗ ನಗರದ ವಿವಿಧ ಮಹಿಳಾ ಕ್ರೀಡಾಪಟುಗಳು ಈ ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದರು. ಉಪ ಮೇಯರ್ ಗನ್ನಿ ಶಂಕರ್, ಮಹಿಳಾ ದಸರಾ ಸಮಿತಿ ಅಧ್ಯಕ್ಷೆ ರೇಖಾ ರಂಗನಾಥ್, ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೀಶ್, ಸುವರ್ಣಾ ಶಂಕರ್, ಧೀರರಾಜ್ ಹೊನ್ನವಿಲೆ, ಸುರೇಖಾ ಮುರಳೀಧರ್, ಅನಿತಾ ರವಿಶಂಕರ್, ಆರತಿ ಆ.ಮ. ಪ್ರಕಾಶ್, ಮಂಜುಳಾ ಶಿವಣ್ಣ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.