ಎಸ್. ಬಂಗಾರಪ್ಪ
ಶಿವಮೊಗ್ಗ: ಭದ್ರಾವತಿಯ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಅ. 26ರಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರಿಗೆ ಮರಣೋತ್ತರವಾಗಿ ವಿಶ್ವಮಾನವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಶ್ರಯ, ಆರಾಧನ, ಅಕ್ಷಯ, ಅಕ್ಷರತುಂಗ, ಗ್ರಾಮೀಣ ಕೃಪಾಂಕ, ರೈತರಿಗೆ ಉಚಿತ ವಿದ್ಯುತ್ ಯೋಜನೆ ಜಾರಿ ಮಾಡಿ ರಾಜ್ಯದ ರೈತರಿಗೆ, ಬಡಜನರಿಗೆ ಬಂಗಾರಪ್ಪ ನೆರವಾಗಿದ್ದಾರೆ. ಅವರ ಬಡವರ ಪರ ಕಾಳಜಿ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆ ಕಾರ್ಮಿಕ ಮುಖಂಡ ಡಿ.ಸಿ. ಮಾಯಣ್ಣ ವಹಿಸಲಿದ್ದಾರೆ. ಪ್ರಶಸ್ತಿಯನ್ನು ಬಂಗಾರಪ್ಪ ಅವರ ಪುತ್ರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಸ್ವೀಕರಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್, ಸೋಮಣ್ಣ, ನಾಗರಾಜ್, ಆಶಮ್ಮ, ನಿರ್ಮಲಾ, ನಾಗರತ್ನ, ಈರೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.