ಸಾಗರ: ತಾಲ್ಲೂಕಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಒತ್ತಾಯಿಸಿ ನಾಗರಿಕ ವೇದಿಕೆ ಮತ್ತು ಮಾನವ ಹಕ್ಕುಗಳ ಸೇವಾ ಸಮಿತಿ ಪ್ರಮುಖರು ಬುಧವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊಲೆ, ಕೊಲೆ ಯತ್ನದಂತಹ ಗಂಭೀರ ಪ್ರಕರಣಗಳಲ್ಲೂ ಆರೋಪಿಗಳನ್ನು ಬಂಧಿಸಲು ಪೊಲೀಸರು ಮೀನಮೇಷ ಎಣಿಸುತ್ತಿರುವುದು ಆತಂಕಕಾರಿ ಸಂಗತಿ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಗಳು ಜನಸಾಮಾನ್ಯರನ್ನು ಬೆದರಿಸುವ, ಸರ್ಕಾರಿ ಭೂಮಿಯನ್ನು ಕಬಳಿಸುವ ಪ್ರಕರಣಗಳು ವರದಿಯಾಗುತ್ತಿವೆ. ಸಮಾಜಘಾತುಕ ಶಕ್ತಿಗಳನ್ನು ಪೊಲೀಸರು ಮಟ್ಟ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಪ್ರಮುಖರಾದ ಎಂ.ರಾಜಶೇಖರ್, ಸುರೇಶ್ ಕಾರ್ಗಲ್, ಅಣ್ಣಪ್ಪ, ಕೃಷ್ಣಮೂರ್ತಿ, ಶೇಖರ ಶೆಡ್ತಿಕೆರೆ, ಮಹೇಶ್ ಆವಿನಹಳ್ಳಿ, ಸತೀಶ್ ಗೌಡ, ಮುರಳೀಧರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.