ADVERTISEMENT

ಸಾಗರ | ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 6:23 IST
Last Updated 22 ನವೆಂಬರ್ 2025, 6:23 IST
ಸಾಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ)ಯ ಕಾರ್ಯಕರ್ತರು ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಕನ್ನಡದಲ್ಲೆ ಅಳವಡಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸಾಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ)ಯ ಕಾರ್ಯಕರ್ತರು ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಕನ್ನಡದಲ್ಲೆ ಅಳವಡಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.   

ಸಾಗರ: ‘ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಕನ್ನಡದಲ್ಲೇ ಅಳವಡಿಸಬೇಕು’ ಎಂದು ಒತ್ತಾಯಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನವನ್ನು ಹಲವು ಅಂಗಡಿ ಮುಂಗಟ್ಟುಗಳ ಮಾಲೀಕರು ಪಾಲಿಸುತ್ತಿಲ್ಲ. ಸ್ಥಳೀಯ ಆಡಳಿತದ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಕನ್ನಡ ಮಾತನಾಡಲು ಬಾರದ ಹೊರ ರಾಜ್ಯ ಮೂಲದ ಉದ್ಯೋಗಿಗಳೆ ನೇಮಕಗೊಳ್ಳುತ್ತಿದ್ದಾರೆ. ಇದರಿಂದ ಸ್ಥಳೀಯ ಗ್ರಾಹಕರಿಗೆ ತೊಂದರೆ ಉಂಟಾಗುತ್ತಿದೆ. ಕನ್ನಡ ಭಾಷೆ ಗೊತ್ತಿಲ್ಲದವರನ್ನು ಬ್ಯಾಂಕ್ ಗಳಲ್ಲಿ ನೇಮಕ ಮಾಡಿಕೊಳ್ಳಬಾರದು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ADVERTISEMENT

ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಮನೋಜ್ ಕುಗ್ವೆ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್, ಪ್ರಮುಖರಾದ ತೀ.ನ.ಶ್ರೀನಿವಾಸ್, ಕುಂಟಗೋಡು ಸೀತಾರಾಮ್, ಎಚ್.ಬಿ.ರಾಘವೇಂದ್ರ, ಸುಧಾಕರ ಕುಗ್ವೆ, ಗಣಪತಿ ಪಡವಗೋಡು, ಷಣ್ಮುಖ ಕೆಂಚಾಳಸರ, ಕುಶ ಕಾಗೋಡು, ಮಹೇಶ್, ಸಂದೀಪ್, ಪುನೀತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.