ಸಾಗರ: ತಾಲ್ಲೂಕಿನ ಆನಂದಪುರದ ಮುಂಬಾಳು ತಿರುವಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಸರಕು ಸಾಗಣೆ ವಾಹನದ ನಡುವೆ ಗುರುವಾರ ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.
ಅದೇ ಮಾರ್ಗದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಮರ್ಕಜ್ ಶಿಕ್ಷಣ ಸಂಸ್ಥೆಯ ವಾಹನದ ಚಾಲಕ ಜಿಯಾವುಲ್ಲಾ ಅವರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.