
ಸಾಗರ: ನಗರವ್ಯಾಪ್ತಿಯಲ್ಲಿ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
‘ಇತ್ತೀಚಿನ ದಿನಗಳಲ್ಲಿ ನಗರವ್ಯಾಪ್ತಿಯಲ್ಲಿ ಪದೇ ಪದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದರಿಂದಾಗಿ ಕುಡಿಯುವ ನೀರು ಪೂರೈಕೆಗೆ ಅಡ್ಡಿಯಾಗುತ್ತಿದೆ. ಸಾರ್ವಜನಿಕರಿಗೆ ಆಗುತ್ತಿರುವ ಈ ತೊಂದರೆಗೆ ಮೆಸ್ಕಾಂ ಕೂಡಲೇ ಸ್ಪಂದಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
‘ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಸಲು ವರದಹಳ್ಳಿ ಫೀಡರ್‌ಗಳನ್ನು ಬಳಸಲಾಗುತ್ತಿದೆ. ತಾಲ್ಲೂಕಿನ ಆವಿನಹಳ್ಳಿ ಫೀಡರ್‌ಗೆ ವರದಹಳ್ಳಿ ಫೀಡರ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗಿರುವುದು ಸಮಸ್ಯೆಗೆ ಕಾರಣ ಎನ್ನಲಾಗುತ್ತಿದೆ. ಕೂಡಲೇ ಈ ಬಗ್ಗೆ ಮೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಬಿಜೆಪಿಯ ನಗರ ಘಟಕದ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್, ಪ್ರಮುಖರಾದ ಆರ್.ಶ್ರೀನಿವಾಸ್ ಮೇಸ್ತ್ರಿ, ಮೈತ್ರಿ ಪಾಟೀಲ್, ಸತೀಶ್ ಕೆ.ಮೊಗವೀರ, ತುಕಾರಾಮ್ ಶೇಟ್, ರಾಜೇಂದ್ರ ಪೈ, ಮಹೇಶ್ ಆರ್. ಪ್ರವೀಣ್, ಪ್ರದೀಪ್ ಆಚಾರಿ, ಚಂದ್ರಕಾಂತ್, ಗಾಯತ್ರಿ, ರತ್ನಾಕರ ಶೇಟ್, ಕೃಷ್ಣ ಶೇಟ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.