ADVERTISEMENT

ಅಂಗನವಾಡಿಗಳ ಸುತ್ತಲಿನ ಪರಿಸರದ ಗುಣಮಟ್ಟ ಕಾಯ್ದುಕೊಳ್ಳಬೇಕು : ಬೇಳೂರು

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 14:00 IST
Last Updated 18 ಜನವರಿ 2024, 14:00 IST
ಸಾಗರದಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕಟ್ಟಡಗಳನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ಲೋಕಾರ್ಪಣೆ ಮಾಡಿದರು
ಸಾಗರದಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕಟ್ಟಡಗಳನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ಲೋಕಾರ್ಪಣೆ ಮಾಡಿದರು   

ಸಾಗರ: ಅಂಗನವಾಡಿಗಳಿಗೆ ಬರುವ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸುತ್ತಲಿನ ಪರಿಸರದ ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಮುಖ್ಯವಾದ ಸಂಗತಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಾರ್ಡ್ ನಂ.7 ಮತ್ತು 11ರಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಸರ್ಕಾರ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡುತ್ತಿದೆ. ಈ ಹಣ ದುರ್ಬಳಕೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯ. ಜೊತೆಗೆ ನಿರ್ಮಾಣವಾದ ಕಟ್ಟಡದ ನಿರ್ವಹಣೆ ಸಹ ಸೂಕ್ತ ರೀತಿಯಲ್ಲಿರಬೇಕು ಎಂದು ಅವರು ಕಿವಿಮಾತು ಹೇಳಿದರು.

ADVERTISEMENT

ರಾಜ್ಯದಲ್ಲಿ 700 ಜನರಿಗೆ ಒಬ್ಬ ಪೌರ ಕಾರ್ಮಿಕ ಇದ್ದಾರೆ. 500 ಜನರಿಗೆ ಒಬ್ಬ ಪೌರ ಕಾರ್ಮಿಕನನ್ನು ನಿಯೋಜನೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಭಿವೃದ್ಧಿಯ ವಿಷಯದಲ್ಲಿ ಪಕ್ಷಪಾತ ಇಲ್ಲದೆ ನಗರವ್ಯಾಪ್ತಿಯ ಎಲ್ಲ ವಾರ್ಡ್‌ಗಳಿಗೂ ಸಮರ್ಪಕವಾಗಿ ಅನುದಾನ ನೀಡಲಾಗುವುದು ಎಂದು ಅವರು ತಿಳಿಸಿದರು.

ನಗರಸಭೆ ಸದಸ್ಯರಾದ ಮಧುರಾ ಶಿವಾನಂದ್, ಗಣಪತಿ ಮಂಡಗಳಲೆ, ಭಾವನಾ ಸಂತೋಷ್, ಕೆ.ಆರ್.ಗಣೇಶ್ ಪ್ರಸಾದ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂತೋಷ್ ಕುಮಾರ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ಬಿ.ವಿ.ರವೀಂದ್ರನಾಥ್, ಗುರುರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.