ಸಾಗರ: ಇಲ್ಲಿನ ಸ್ಪಂದನ ರಂಗ ತಂಡವು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದೊಂದಿಗೆ ಎಸ್.ಎನ್.ನಗರ ಬಡಾವಣೆಯ ಭೂಮಿ ರಂಗಮನೆಯಲ್ಲಿ 9 ರಿಂದ 13 ವರ್ಷದೊಳಗಿನ ಮಕ್ಕಳಿಗೆ ‘ಕಲರವ’ ರಂಗ ತರಬೇತಿ ಶಿಬಿರ ಆಯೋಜಿಸಿದೆ.
ಭೂಮಿ ಆರ್.ಪಿ. ಶಿಬಿರದ ನಿರ್ದೇಶಕರಾಗಿದ್ದು ಶಿಬಿರಾರ್ಥಿಗಳಿಗೆ ಉಚಿತ ಪ್ರವೇಶವಿದ್ದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 9945178792 ಅಥವಾ 9482384275 ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸ್ಪಂದನದ ಅಧ್ಯಕ್ಷೆ ಎಂ.ವಿ.ಪ್ರತಿಭಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.