ಸಾಗರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
ಸಾಮಾನ್ಯ ಭತ್ತವನ್ನು ಕ್ವಿಂಟಲ್‌ಗೆ ₹2,300, ಎ ಗ್ರೇಡ್ ಭತ್ತವನ್ನು ₹2,320 ದರದಲ್ಲಿ ಖರೀದಿಸಲಾಗುವುದು. ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ಫೆ.28 ರೊಳಗೆ ಹೆಸರು ನೊಂದಾಯಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಾಗರ ತಾಲ್ಲೂಕಿನ ರೈತರಿಂದ ಭತ್ತ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಲವನ್ನು ಸಂಗ್ರಹಣಾ ಏಜೆನ್ಸಿಯಾಗಿ ನೇಮಿಸಲಾಗಿದೆ. ನೋಂದಾಯಿಸಲ್ಪಟ್ಟ ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್‌ನಂತೆ ಗರಿಷ್ಠ 50 ಕ್ವಿಂಟಲ್ ಭತ್ತ ಖರೀದಿಸಲಾಗುವುದು. ಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರ ತೆರೆಯಲಾಗಿದ್ದು ಮಾ. 31 ರವರೆಗೂ ಅದು ತೆರೆದಿರುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.