
ಪ್ರಜಾವಾಣಿ ವಾರ್ತೆ
ಸಾಗರ: ತಾಲ್ಲೂಕಿನ ಭೀಮನೇರಿ ಗ್ರಾಮದ ಸಮೀಪ ಗುರುವಾರ ಶುಂಠಿ ತುಂಬಿದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿದೆ.
ಸಾಗರದಿಂದ ಶುಂಠಿ ತುಂಬಿಕೊಂಡು ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿ ಹಾಗೂ ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ರಸ್ತೆಗೆ ಅಡ್ಡವಾಗಿ ಬಂದ ಹಾವನ್ನು ತಪ್ಪಿಸಲು ಕಾರಿನ ಚಾಲಕ ಹೋದಾಗ ಈ ಅಪಘಾತ ಉಂಟಾಗಿದೆ ಎನ್ನಲಾಗಿದೆ.
ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.