ಸಾಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿರುವ ದುಷ್ಕೃತ್ಯವನ್ನು ಖಂಡಿಸಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಅತ್ಯಂತ ಅಮಾನುಷವಾಗಿದೆ. ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಇಲ್ಲಿ ಎದ್ದು ಕಾಣುತ್ತಿದೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಹೇಳಿದರು.
ಅಮಾಯಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿರುವ ದಾಳಿ ಅತ್ಯಂತ ಹೇಯ ಕೃತ್ಯವಾಗಿದೆ. ಇದಕ್ಕೆ ಕಾರಣರಾದವರನ್ನು ಕೇಂದ್ರ ಸರ್ಕಾರ ಶೀಘ್ರವಾಗಿ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ನಗರಸಭೆ ಸದಸ್ಯೆ ಮಧುಮಾಲತಿ ಒತ್ತಾಯಿಸಿದರು.
ಪ್ರಮುಖರಾದ ಐ.ಎನ್.ಸುರೇಶ್ ಬಾಬು, ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ರವಿ ಜಂಬೂರುಮನೆ, ಎಸ್.ಪಿ.ದೇವರಾಜ್, ಮಹ್ಮದ್ ಜಿಕ್ರಿಯಾ, ರಮೇಶ್ ಚಂದ್ರಗುತ್ತಿ, ಪಾರ್ವತಿ ಬೇಸೂರು, ಬೀರೇಶ್ ಕಾಗೋಡು, ಸದ್ದಾಂ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.