ಸಾಗರ: ಇಲ್ಲಿನ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ ನಗರಸಭೆ ವಾಹನವನ್ನು ಅಡ್ಡಗಟ್ಟಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇರೆಗೆ ಕೆಆರ್ ಎಸ್ ಪಕ್ಷದ ಸ್ಥಳೀಯ ಘಟಕದ ಪ್ರಮುಖರಾದ ವೀರಭದ್ರ, ನಾಗಭೂಷಣ, ಗಿರೀಶ ಹಾಗೂ ಇತರ ಹತ್ತು ಮಂದಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರಸಭೆ ವಾಹನ ಚಾಲಕ ಕೃಷ್ಣ ನೀಡಿರುವ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ಅಕ್ರಮ ಕೂಟ ಕಟ್ಟಿಕೊಂಡು ನಗರಸಭೆ ನೌಕರರನ್ನು ಅಡ್ಡಗಟ್ಟಿ ಕರ್ತವ್ಯಕ್ಕೆ ಅಡ್ಡಿ ಪಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.