ADVERTISEMENT

ಸಾಗರ | ಕಾಡು ಹಂದಿ ಬೇಟೆ: ಮೂವರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 14:48 IST
Last Updated 16 ಏಪ್ರಿಲ್ 2025, 14:48 IST

ಸಾಗರ: ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುತ್ತಿದ್ದ ಮೂವರ ವಿರುದ್ಧ ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ.

ಬಾಳೆಗುಂಡಿ ಗ್ರಾಮದ ಕೆರೆ ದಂಡೆಯ ಮೇಲೆ ಬೇಟೆಯಾಡಿದ್ದ ಕಾಡು ಹಂದಿ ಮಾಂಸವನ್ನು ಹಂಚಿಕೊಳ್ಳುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಆರೋಪಿಗಳನ್ನು ಪ್ರಭಾಕರ್, ಗಣಪತಿ, ಅಣ್ಣಪ್ಪ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ದೊರಕಿದ ನಾಲ್ಕೂವರೆ ಕೆಜಿ ಕಾಡು ಹಂದಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಉಪ ವಲಯ ಅರಣ್ಯಾಧಿಕಾರಿ ಕಿರಣ್, ವಲಯ ಅರಣ್ಯಾಧಿಕಾರಿ ಅಣ್ಣಪ್ಪ, ಸಿಬ್ಬಂದಿ ಸುರೇಶ್, ಬಸವರಾಜ್, ಸುನೀತ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.