ಸಾಗರ: ಒತ್ತಡದ ಜೀವನ ಶೈಲಿಯಿಂದ ಯುವಜನರೂ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಹೇಳಿದರು.
ಇಲ್ಲಿನ ಸಾಗರ ಕರಾಟೆ ಸಂಸ್ಥೆ ಏರ್ಪಡಿಸಿದ್ದ ಏರೋಬಿಕ್ಸ್ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದವರು ತಮ್ಮ ಆರೋಗ್ಯ ರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು.
ಹಿಂದಿನ ತಲೆಮಾರಿನವರಿಗೆ ಹೋಲಿಸಿದರೆ ಈ ತಲೆಮಾರಿನವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದೆ ಎಂಬುದು ಗೊತ್ತಾಗುತ್ತದೆ. ಸತ್ವಯುತ ಆಹಾರ ಸೇವನೆಯ ಕೊರತೆ, ಬದಲಾಗಿರುವ ಜೀವನ ಶೈಲಿ ಇದಕ್ಕೆ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕರಾಟೆ ತರಬೇತುದಾರ ಪಂಚಪ್ಪ, ನವೀನ್ ಫರ್ನಾಂಡಿಸ್, ಚಂದ್ರಶೇಖರ್, ರಾಘವೇಂದ್ರ, ಶೇಷಾಚಲ, ಕಿರಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.