ಭದ್ರಾವತಿ: ಇಲ್ಲಿನ ನ್ಯೂಟೌನ್ ಶಾರದ ಮಂದಿರದಲ್ಲಿ ಮಿತ್ರ ಕಲಾ ಮಂಡಳಿ ವತಿಯಿಂದ ಈಚೆಗೆ ನಾಟಕ ಪ್ರದರ್ಶನ ನಡೆಯಿತು.
ರಂಗಕರ್ಮಿ, ಕಿರುತೆರೆ, ಚಲನಚಿತ್ರ ನಟ ಅಪರಂಜಿ ಶಿವರಾಜ್ ವಿನ್ಯಾಸ ಮತ್ತು ನಿರ್ದೇಶನದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರ ಜಾನಪದ ನಾಟಕ ‘ಸಂಗ್ಯಾ ಬಾಳ್ಯಾ’ ನಾಟಕ ಪ್ರದರ್ಶನವನ್ನು ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ ಉದ್ಘಾಟಿಸಿರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಎಚ್. ಉಮೇಶ್, ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಹಾಯಕ ನಿರ್ದೇಶಕಿ ಭಾಗ್ಯಮ್ಮ, ಉದ್ಯಮಿ ಬಿ.ಕೆ.ಜಗನ್ನಾಥ, ಸತ್ಯಸಾಯಿಬಾಬಾ ಸಮಗ್ರ ಶಿಕ್ಷಣ ಸಂಸ್ಥೆಯ ಸಂಯೋಜಕ ಜಿ.ಪಿ. ಪರಮೇಶ್ವರಪ್ಪ, ನವೋದಯ ಕಲಾ ಸಂಘದ ಅಧ್ಯಕ್ಷ ಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಲಾವಿದರು ತಮ್ಮ ಪಾತ್ರಗಳಿಗೆ ಜೀವ ತುಂಬಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.