ADVERTISEMENT

ಹೊಸನಗರ | ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 4:46 IST
Last Updated 16 ಜನವರಿ 2026, 4:46 IST
ಹೊಸನಗರ ಪಟ್ಟಣದ ಲಕ್ಷ್ಮೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು
ಹೊಸನಗರ ಪಟ್ಟಣದ ಲಕ್ಷ್ಮೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು   

ಹೊಸನಗರ: ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಪುರಾಣ ಪ್ರಸಿದ್ಧ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆದವು.

ಬೆಳಿಗ್ಗೆ ದೇವಸ್ಥಾನದಲ್ಲಿ ಭಕ್ತರ ಕಲ್ಯಾಣಾರ್ಥವಾಗಿ ಪವಮಾನ ಸೂಕ್ತ ಪಾರಾಯಣ ನಡೆಯಿತು. ನಂತರ ಪಂಚಾಮೃತಾಭಿಷೇಕ ಹಾಗೂ ಪವಮಾನ ಕಲಶಾಭಿಷೇಕ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರಿಂದ ಅಷ್ಟೋತ್ತರ ಶತಾಧಿಕ ಸಹಸ್ರನಾಮ ಪಾರಾಯಣ ನಡೆಯಿತು.

ಮಧ್ಯಾಹ್ನ ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ತೀರ್ಥ-ಪ್ರಸಾದ ವಿತರಿಸಲಾಯಿತು. ಸಂಜೆ ವೇಳೆಗೆ ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ಹಾಗೂ ಮಹಾಮಂಗಳಾರತಿ ನೆರವೇರಿತು.

ADVERTISEMENT

ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಎನ್. ಸುಧಾಕರ್ ಮತ್ತು ಸಮಿತಿ ಸದಸ್ಯರು ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.