ADVERTISEMENT

ಶಿವಮೊಗ್ಗ | ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಮೇ 15ರಂದು

​ಪ್ರಜಾವಾಣಿ ವಾರ್ತೆ
Published 13 ಮೇ 2025, 16:05 IST
Last Updated 13 ಮೇ 2025, 16:05 IST

ಶಿವಮೊಗ್ಗ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 65ನೇ ವರ್ಷದ ಜನ್ಮದಿನದ ಸಂಭ್ರಮಾಚರಣೆಯ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ಭಾರತೀಯ ಯೋಧರಿಗೆ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮೇ 15ರಂದು ಬೆಳಿಗ್ಗೆ 11ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಕುಣಿಗಲ್ ಶಾಸಕ ಡಾ.ರಂಗನಾಥ್, ಮಾಜಿ ಸಚಿವೆ ಉಮಾಶ್ರೀ ಭಾಗವಹಿಸುವರು ಎಂದು ಅಭಿಮಾನಿ ಸಂಘದ ಅಧ್ಯಕ್ಷ ಆರ್. ಮೋಹನ್ ಹೇಳಿದರು.

ಉಪನ್ಯಾಸಕ ವಿ. ದತ್ತಮೂರ್ತಿ ಭಟ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಗಿರೀಶ್ ಮತ್ತು ವೃಂದದಿಂದ ದೇಶಭಕ್ತಿಗೀತೆಗಳನ್ನು ಆಯೋಜಿಸಲಾಗಿದೆ. ಇದೇ ವೇಳೆ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಪ್ರಕಾಶ್, ರಾಮಚಂದ್ರಪ್ಪ, ಹನುಮೇಶ್, ತಂಗರಾಜ್, ಮಂಜುನಾಥ್, ಸಿದ್ದಪ್ಪ, ಗಣೇಶಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.