ADVERTISEMENT

ಶಿವಮೊಗ್ಗ | ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ: ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2025, 7:26 IST
Last Updated 16 ನವೆಂಬರ್ 2025, 7:26 IST
   

ಶಿವಮೊಗ್ಗ: 2025– 26ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ– 1ರ ಅಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ– ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಕಡೆಯ ದಿನಾಂಕ ನ. 25ರವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ವೆಬ್‌ಸೈಟ್ https://ssp. postmatric.karnataka.gov.in ಮೂಲಕ ನ. 25ರೊಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in  ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ADVERTISEMENT

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ: 80507 70005, ಇ– ಮೇಲ್ bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ–ಮೇಲ್ postmatrichelp@karnataka.gov. in ಅಥವಾ ದೂ.ಸಂ: 1902 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.