ರಿಪ್ಪನ್‌ಪೇಟೆ: ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಶಿಥಿಲ ಚಾವಣಿ, ಗೋಡೆಗಳು ಭಾರಿ ಮಳೆಯಿಂದ ಕುಸಿದು ಬಿದ್ದಿವೆ.
ಸೋಮವಾರ ರಾತ್ರಿ ವೇಳೆ ಕಟ್ಟಡ ಕುಸಿದ ಪರಿಣಾಮ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಶಾಲೆಯಲ್ಲಿ ಪ್ರಸ್ತುತ 17 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಕಾರಣ ವಿದ್ಯಾರ್ಥಿಗಳು ಮುಖ್ಯಶಿಕ್ಷಕರ ಕೊಠಡಿಯಲ್ಲಿ ತಾತ್ಕಾಲಿಕವಾಗಿ ಪಾಠ ಕೇಳುವಂತಾಗಿದೆ. ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗದಂತೆ ತಕ್ಷಣವೇ ಸರ್ಕಾರ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಪೋಷಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘಟನೆ ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.