
ಪ್ರಜಾವಾಣಿ ವಾರ್ತೆ
ಮಳೆ
ಶಿವಮೊಗ್ಗ: ಜಿಲ್ಕೆಯಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಜುಲೈ 26ರಂದು ಶನಿವಾರ ರಜೆ ಘೋಷಿಸಲಾಗಿದೆ.
ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ-ಕಾಲೇಜು ಮುಖ್ಯಸ್ಥರಿಗೆ ತಿಳಿಸಿದೆ ಎಂದು ಡಿಡಿಪಿಐ ಮಂಜುನಾಥ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.