ಭದ್ರಾವತಿ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಮೂಢನಂಬಿಕೆಗಳಿಂದ ದೂರವಿರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಕರೆ ನೀಡಿದರು.
ನಗರದ ನ್ಯೂಟೌನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿ.ವಿ. ರಾಮನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ, ವಿಜ್ಞಾನ ಪ್ರಯೋಗ ಉದ್ಘಾಟಿಸಿ ಅವರು ಮಾತನಾಡಿದರು.
ಸಂಪನ್ಮೂಲ ಶಿಕ್ಷಕ ಮುಕ್ತೆಶ್, ಬೊಮ್ಮನಕಟ್ಟೆ ಕ್ಲಸ್ಟರ್‌ನ ಸಿಆರ್‌ಪಿ ಲಕ್ಷ್ಮಿ ತೀರ್ಪುಗಾರರಾಗಿ ಭಾಗವಹಿಸಿದ್ದರು. ಉಪ ಪ್ರಾಚಾರ್ಯರಾದ ಸುಮನ ಟಿ.ಎಸ್. ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಶಿಕ್ಷಕರಾದ ಜಯಲಕ್ಷ್ಮಿ, ನಾಗರಾಜು, ಫರ್ಜಾನ ಮಾರ್ಗದರ್ಶನ ನೀಡಿದರು.
ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.