
ಪ್ರಜಾವಾಣಿ ವಾರ್ತೆ
ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಯನೂರು ಸಮೀಪದ ಹೊಸೂರು ನಿವಾಸಿ ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (65) ಮೃತರು.
ತೀರ್ಥಹಳ್ಳಿ ತಾಲ್ಲೂಕಿನ ಅಂಬು ತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.
ಈ ಕುರಿತು ರಿಪ್ಪನ್ ಪೇಟೆ ಠಾಣೆಯ ಪಿಎಸ್ಐ ರಾಜು ರೆಡ್ಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.