ADVERTISEMENT

ರಂಗನಟ ನಾಗರಾಜ ರಾಯ್ಕರ್‌

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 16:55 IST
Last Updated 20 ಆಗಸ್ಟ್ 2019, 16:55 IST
ನಾಗರಾಜ ರಾಯ್ಕರ್
ನಾಗರಾಜ ರಾಯ್ಕರ್   

ಸಾಗರ: ರಂಗನಟ, ಕವಿ, ಸಾಮಾಜಿಕ ಕಾರ್ಯಕರ್ತ ನಾಗರಾಜ ರಾಯ್ಕರ್ (72) ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದಲ್ಲಿ ಉದ್ಯೋಗಿಯಾಗಿದ್ದ ಅವರು ಬಳಕೆದಾರ ವೇದಿಕೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ, ಹಾಲಿ ಅದರ ನಿರ್ದೇಶಕರಾಗಿದ್ದರು. ಹವ್ಯಾಸಿ ರಂಗತಂಡದ ಹಲವು ನಾಟಕಗಳಲ್ಲಿ ಅಭಿನಯಿಸಿದ್ದರು.

‘ಬೆಳ್ಳಿ ಬೆಳಕಿನ ಹಿಂದೆ’ ನಾಟಕದಲ್ಲಿನ ತುಂಗತ್ತೆಯ ಪಾತ್ರ ಅವರಿಗೆ ಹೆಸರು ತಂದಿತ್ತು. ಹಲವು ಪತ್ರಿಕೆಗಳಲ್ಲಿ ಅವರ ಕವಿತೆಗಳು ಪ್ರಕಟವಾಗಿವೆ. ಮಂಗಳವಾರ ಅಂತ್ಯಕ್ರಿಯೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.