ADVERTISEMENT

ಲೈಂಗಿಕ ದೌರ್ಜನ್ಯ: 20 ವರ್ಷ ಕಠಿಣ ಶಿಕ್ಷೆ, ₹ 50 ಸಾವಿರ ದಂಡ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 2:16 IST
Last Updated 24 ಜೂನ್ 2022, 2:16 IST
ಆನವಟ್ಟಿ ಸಮೀಪದ ಬೆಟ್ಟದಕೂರ್ಲಿಯಿಂದ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದರು
ಆನವಟ್ಟಿ ಸಮೀಪದ ಬೆಟ್ಟದಕೂರ್ಲಿಯಿಂದ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದರು   

ಶಿವಮೊಗ್ಗ: ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಗುರುವಾರ ಆದೇಶಿಸಿದೆ. ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ ಆರು ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಲಾಗಿದೆ.

ಭದ್ರಾವತಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ 2019ರ ಫೆಬ್ರುವರಿ 10ರಂದು ಲೈಂಗಿಕ ದೌರ್ಜನ್ಯ ಘಟನೆ ನಡೆದಿತ್ತು. ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ಚಾಕೊಲೆಟ್ ಕೊಡಿಸುವ ನೆಪದಲ್ಲಿ ಕರೆದೊಯ್ದು ಲಿಂಗರಾಜ (18) ಎಂಬಾತ ಕೃತ್ಯ ಎಸಗಿದ್ದ.

ಬಗ್ಗೆ ಬಾಲಕಿಯ ಪಾಲಕರು ನೀಡಿದ ದೂರು ಆಧರಿಸಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದರು.

ADVERTISEMENT

ತನಿಖೆ ನಡೆಸಿದ್ದ ಸಿಪಿಐ ಯೋಗೇಶ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.