
ಬಂಧನ
ಶಿವಮೊಗ್ಗ: ತಾಲ್ಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 21 ವರ್ಷದ ಯುವಕನಿಗೆ ಪೋಕ್ಸೊ ಅಡಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ.
ದಂಡ ಪಾವತಿಸಲು ವಿಫಲವಾದಲ್ಲಿ ಮೂರು ವರ್ಷ ಹೆಚ್ಚುವರಿ ಸಾದಾ ಸೆರೆವಾಸ ಶಿಕ್ಷೆ ವಿಧಿಸಿದೆ. 2022ರಲ್ಲಿ ಪ್ರಕರಣ ನಡೆದಿತ್ತು. ಕುಂಸಿ ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ಅಭಯಪ್ರಕಾಶ್ ಸೋಮನಾಳ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಯು ಮೃತಟ್ಟಿದ್ದು, ಆಕೆಯ ತಾಯಿಗೆ ₹4 ಲಕ್ಷ ಹಣವನ್ನು ಪರಿಹಾರವಾಗಿ ನೀಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಕೀಲ ಶ್ರೀಧರ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.