ADVERTISEMENT

ಬಾಲಕಿಗೆ ಲೈಂಗಿಕ ದೌರ್ಜನ್ಯ: 5 ವರ್ಷ ಕಾರಾಗೃಹ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 4:49 IST
Last Updated 20 ಏಪ್ರಿಲ್ 2022, 4:49 IST

ಶಿವಮೊಗ್ಗ: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 5 ವರ್ಷ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ.

ಶಿವಮೊಗ್ಗದ ಮಂಜಪ್ಪ (49) ಶಿಕ್ಷೆಗೆ ಗುರಿಯಾದವನು. 2020ರ ಡಿಸೆಂಬರ್‌ 5ರಂದು 9 ವರ್ಷದ ಬಾಲಕಿ ಮೇಲೆ ಮಂಜಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕಿ ನೀಡಿದ ಹೇಳಿಕೆ ಆಧಾರದಲ್ಲಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಹಿಳಾ ಠಾಣೆ ಪಿಎಸ್‌ಐ ಶಾಂತಲಾ ಅವರು ತನಿಖೆ ನಡೆಸಿ 2021ರಂದು ಜನವರಿ 27ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ADVERTISEMENT

ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯದ ಎಫ್‌ಟಿಎಸ್‌ಸಿ–1 ಕೋರ್ಟ್‌ನ ನ್ಯಾಯಾಧೀಶರಾದ ವಿ.ಎಚ್‌. ದಯಾನಂದ್‌ ಅವರು ಮಂಜಪ್ಪನಿಗೆ 5 ವರ್ಷಗಳ ಕಾಲ ಕಠಿಣ ಕಾರಾವಾಸ ಶಿಕ್ಷೆ ಮತ್ತು ₹ 30 ದಂಡ, ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳ ಕಾಲ ಕಾರಾಗೃಹ ಶಿಕ್ಷೆ ನೀಡಿ ಆದೇಶ ನೀಡಿದ್ದಾರೆ.

ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.