ADVERTISEMENT

ಹೊಳೆಹೊನ್ನೂರು: ವೈದ್ಯನಿಂದ ಲೈಂಗಿಕ ಕಿರುಕುಳ; ಮಹಿಳೆ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 5:20 IST
Last Updated 17 ನವೆಂಬರ್ 2021, 5:20 IST
ಡಾ.ಮೋಹನ್
ಡಾ.ಮೋಹನ್   

ಹೊಳೆಹೊನ್ನೂರು: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ‘ಡಿ’ ದರ್ಜೆ ನೌಕರರಾಗಿ ಕೆಲಸ ನಿರ್ಹಿಸುತ್ತಿರುವ 31 ವರ್ಷದ ಮಹಿಳೆಯೊಬ್ಬರು ವೈದ್ಯರ ಲೈಂಗಿಕ ಕಿರುಕುಳದಿಂದ ಬೇಸತ್ತು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ವೈದ್ಯನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

‘ಆರೋಗ್ಯ ಕೇಂದ್ರದ ದಂತವ್ಯೆದ್ಯ ಡಾ.ಮೋಹನ್ ಅವರು ಮಹಿಳೆಯನ್ನು ತಮ್ಮ ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದರು. ಕೆಲಸದ ಸಮಯದಲ್ಲಿ ಕೈಹಿಡಿದು ಎಳೆಯುವುದು, ಅಸಭ್ಯವಾಗಿ ವರ್ತಿಸುತ್ತಿದ್ದರು. ನ. 12ರಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು’ ಎಂದು ಮಹಿಳೆ ಹೇಳಿಕೆಯಲ್ಲಿ
ತಿಳಿಸಿದ್ದಾರೆ.

‘ವೈದ್ಯರ ನಿಂದನೆಯಿಂದ ಬೇಸತ್ತು ಆರೋಗ್ಯ ಕೇಂದ್ರದ ಸ್ಟೋರ್‌ನಲ್ಲಿದ್ದ 30 ನಿದ್ದೆ ಮಾತ್ರೆಗಳನ್ನು ಸೇವಿಸಿ ಮಹಿಳೆ ಆತ್ಮಹತ್ಯಗೆ ಯತ್ನಿಸಿದ್ದಾರೆ. ವಿಷಯ ತಿಳಿದ ಕೇಂದ್ರದ ಸಿಬ್ಬಂದಿ ನಾಗರಾಜ್ ಅವರು ಮಹಿಳೆಯ ಕುಟುಂಬದವರಿಗೆ ವಿಷಯ ತಿಳಿಸಿ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದರು. ಮಹಿಳೆ ಮತ್ತು ಅವರ ಪತಿಯ ದೂರು ಆಧರಿಸಿ ವೈದ್ಯ ಡಾ.ಮೋಹನ್‌ ಹಾಗೂ ಆರೋಗ್ಯ ಸಮಿತಿ ಸದಸ್ಯೆ ಸುಮಾ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮಹಿಳೆ ಈಗ ಚೇತರಿಸಿಕೊಂಡಿದ್ದಾರೆ’ ಎಂದು ಹೊಳೆಹೊನ್ನೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.