ADVERTISEMENT

ಶರಣರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ: ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದ ಆರಗ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 4:39 IST
Last Updated 4 ಸೆಪ್ಟೆಂಬರ್ 2022, 4:39 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಶಿವಮೊಗ್ಗ: ‘ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ಸರ್ಕಾರ ಯಾವುದೇ ರೀತಿಯಲ್ಲಿಯೂ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತನಿಖೆ ದೃಷ್ಟಿಯಿಂದ ಈಗಲೇ ಹೆಚ್ಚಿಗೆ ಏನೂ ಹೇಳಲಾಗುವುದಿಲ್ಲ. ಮಠಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದೆ. ಈಗಾಗಲೇ ಭದ್ರತೆಗೆ ಏಳು ಕೆಎಸ್‌ಆರ್‌ಪಿ ತುಕಡಿ ತಂಡ ನಿಯೋಜಿಸಲಾಗಿದೆ’ ಎಂದರು.

8ರಂದು ಜನೋತ್ಸವ ಕಾರ್ಯಕ್ರಮ: ‘ರಾಜ್ಯದ ಬಗ್ಗೆ ಮೋದಿಯವರಿಗೆ ವಿಶೇಷ ಆಸಕ್ತಿ ಇದೆ. ತಿಂಗಳಿಗೊಮ್ಮೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಮುಂಬರುವ ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ. ಸೆಪ್ಟೆಂಬರ್‌ 8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದೆ’ ಎಂದು ಹೇಳಿದರು.

ADVERTISEMENT

ಪ್ರಧಾನಿ ಮೋದಿ ಭೇಟಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಪ್ರಧಾನಿಯಾಗಿ ಏನು ಕೆಲಸ ಮಾಡಬೇಕೋ ಅದನ್ನು ಮೋದಿ ಮಾಡುತ್ತಾರೆ. ಪ್ರಧಾನಿ ಕುರಿತು ಕುಮಾರಸ್ವಾಮಿ ನೀಡಿರುವ ಹೇಳಿಕೆ ಸರಿಯಿಲ್ಲ. ಮಳೆ ಹಾನಿಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇಕ್ರಮ ಕೈಗೊಂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.