ಶಿವಮೊಗ್ಗ: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಲ್ಲಿನ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಡಾ.ಅಶ್ವಿನ್ ಹೆಬ್ಬಾರ ವಿರುದ್ಧ ಸಂತ್ರಸ್ತೆ ವಾರದ ಹಿಂದೆ ದೂರು ದಾಖಲಿಸಿದ್ದರು. ಪೊಲೀಸರು ಎಫ್‌ಐಆರ್ ದಾಖಲಿಸುತ್ತಿದ್ದಂತೆಯೇ ಹೆಬ್ಬಾರ ತಲೆಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ಡಿವೈಎಸ್ಪಿ ಬಾಬು ಅಂಜನಪ್ಪ ನೇತೃತ್ವದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ವಿಶೇಷ ತಂಡ ರಚಿಸಿದ್ದರು.
ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ಶಿವಮೊಗ್ಗಕ್ಕೆ ಕರೆತಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬಾಬು ಅಂಜನಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.