ADVERTISEMENT

ಶಿವಮೊಗ್ಗ | ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕನ ಬಂಧನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2024, 23:56 IST
Last Updated 21 ಆಗಸ್ಟ್ 2024, 23:56 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಶಿವಮೊಗ್ಗ: ಐವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕನೊಬ್ಬನನ್ನು ಪೊಲೀಸರು ಬೆಂಗಳೂರು ಬಳಿಯ ನೆಲಮಂಗಲದಲ್ಲಿ ಬುಧವಾರ ಬಂಧಿಸಿದ್ದಾರೆ.

45 ವರ್ಷದ ಆರೋಪಿ ಅದೇ ಶಾಲೆಯಲ್ಲಿ ಕಳೆದ ಏಳು ತಿಂಗಳಿಂದ ಕೆಲಸ ಮಾಡುತ್ತಿದ್ದ. ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ ಶಾಲೆಯ ಪ್ರಾಚಾರ್ಯರು ಪೊಲೀಸರಿಗೆ ದೂರು ನೀಡಿದ್ದರು. ‘ವಸತಿ ಶಾಲೆಯ 21 ಜನ ವಿದ್ಯಾರ್ಥಿನಿಯರಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಐವರು ದೂರು ನೀಡಿದ್ದಾರೆ. ತಕ್ಷಣ ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಫೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದ್ದೇವೆ’ ಎಂದು ಎಸ್‌ಪಿ ಜಿ.ಕೆ. ಮಿಥುನ್‌ಕುಮಾರ್ ತಿಳಿಸಿದರು.

ADVERTISEMENT

‘ಶಿಕ್ಷಕನ ಕೃತ್ಯಕ್ಕೆ ತಾವು ಸಾಕ್ಷಿ ಎಂದು ಉಳಿದ ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಅವರನ್ನು ವೈದ್ಯಕೀಯ ಪರೀಕ್ಷೆ ಹಾಗೂ ಆಪ್ತ ಸಮಾಲೋಚನೆಗೆ ಒಳಪಡಿಸಿದ್ದೇವೆ. ಅವರಲ್ಲಿ ಯಾರಾದರೂ ಲೈಂಗಿಕ ದೌರ್ಜನ್ಯದ ಸಂತ್ರಸ್ತರು ಇದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲಾಗುವುದು’ ಎಂದು ಎಸ್‌ಪಿ ಹೇಳಿದರು.

ಯಾವುದೇ ವಸತಿ ಶಾಲೆಯಲ್ಲಿ ದೌರ್ಜನ್ಯ, ಲೈಂಗಿಕ ಕಿರುಕುಳದಂತಹ ಕೃತ್ಯಗಳು ಕಂಡುಬಂದಲ್ಲಿ, ತಕ್ಷಣ 1098 ಸಂಖ್ಯೆಗೆ ಇಲ್ಲವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.